ಮಧ್ವಾಚಾರ್ಯರು ಮತ್ತು Leadership Quality

ಅಮಂತ್ರಂ ಅಕ್ಷರಂ ನಾಸ್ತಿ ನಾಸ್ತಿ ಮೂಲಂ ಅನೌಷಧಂ| ಅಯೋಗ್ಯಃ ಪುರುಷೋ ನಾಸ್ತಿ ಯೋಜಕಃ ತತ್ರ ದುರ್ಲಭಃ|| ಸುಭಾಷಿತಕಾರ ಹೀಗೆ ಹೇಳುತ್ತಾನೆ.ಮಂತ್ರವಲ್ಲದ ಅಕ್ಷರವಿಲ್ಲ, ಔಷಧೀಯ ಗುಣವಿಲ್ಲದ ಗಿಡಮೂಲಿಕೆಗಳಿಲ್ಲ, ಅಯೋಗ್ಯನಾದ ಮನುಷ್ಯನಿಲ್ಲ. ಇರುವುದೊಂದೇ, ಅದು ಯೋಜಕರ ಕೊರತೆ. ಭಾರತೀಯ ಸಮಾಜ ಅನುಭವಿಸುತ್ತಿರುವ ಕೊರತೆ ಇದು. ಯೋಜಕರಾದ ನಾಯಕರುಗಳು ತೀರ ವಿರಳ. ಆಚಾರ್ಯರನ್ನು ತ್ರಿವಿಕ್ರಮಪಂಡಿತಾಚರ್ಯರು “ ಆಧ್ಯಾತ್ಮಜ್ಞಾನನೇತಾ ” ಎಂದು ಕರೆದಿದ್ದಾರೆ.ಆಧ್ಯಾತ್ಮಜ್ಞಾನದತ್ತ ನಮ್ಮನ್ನು ಕೊಂಡೊಯ್ಯುವ “ನಾಯಕ” ಆಚಾರ್ಯರು. ಸಾಮಾಜಿಕವಾಗಿ ನಾಯಕತ್ವಗುಣವನ್ನು ಲೋಕಕ್ಕೆ ತೋರಿಸುತ್ತಾ ಅನೇಕರನ್ನು ಪ್ರಭಾವಿಸಿದವರು. ಅವರು ವ್ಯಕ್ತಿಯು ನಾಯಕನಾಗಬೇಕಾದರೇ ಅಳವಡಿಸಿಕೊಳ್ಳಬೇಕಾದ ಗುಣಗಳ (Leadership qualities)ಬಗ್ಗೆ ಚೆಲ್ಲಿದ ಬೆಳಕನ್ನು ಕಾಣಲು ಪ್ರಯತ್ನಿಸೋಣ. ಮುಂದಾಳುತ್ವ ಗುಣ (leading from front) ನಾಯಕನಾದವನು ತಾನು ಮುಂದೆ ನಿಂತು ,ಸೋಲು ಗೆಲುವುಗಳ ಜವಾಬ್ದಾರಿಯನ್ನು ಹೊತ್ತು,ತನ್ನ ಜೊತೆಯಿರುವವರನ್ನು ಮುನ್ನಡೆಸಬೇಕು. ಯಶಸ್ಸನ್ನು ಪಡೆದಾಗ ಅದರ ಶ್ರೇಯಸ್ಸನ್ನು ಪಡೆದು,ಯಶ ಕಾಣದಾಗ ಜವಾಬ್ದಾರಿಯಿಂದ ನುಣಿಚಿಕೊಂಡು,ಅಪಕೀರ್ತಿಯ ಜವಾಬ್ದಾರಿಯನ್ನು ತನ್ನವರ ಮೇಲೆ ಹ...